May 6, 2026

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

0
IMG-20240304-WA0004.jpg

ಕಾಣಿಯೂರು: ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾಶ್ರೀ (26) ಮೃತ ಯುವತಿ.

ಮಾ.3ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ದಿವ್ಯಾಶ್ರೀ ಅವರು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ನಡೆಸಿರುವುದನ್ನು ಗಮನಿಸಿ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಯುವತಿ ಮೃತಪಟ್ಟಿದ್ದರು.

ಯುವತಿಯ ಬಗ್ಗೆ ಎರಡು ತಿಂಗಳ ಹಿಂದೆ ಅಪಪ್ರಚಾರ ನಡೆಸಲಾಗಿದ್ದು, ಇದೇ ಕಾರಣಕ್ಕೆ ನೊಂದು ಯುವತಿ ಕೃತ್ಯ ಎಸಗಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!