May 6, 2026

ಕಡಬ: ಆ್ಯಸಿಡ್ ದಾಳಿ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಉಸ್ತುವಾರಿ ಸಚಿವ ಗುಂಡೂರಾವ್ ಸೂಚನೆ

0
image_editor_output_image-2101796876-1709556425271.jpg

ಕಡಬ: ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ. ಜಿಲ್ಲಾ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ  ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಪರಿಹಾರ ಸೇರಿದಂತೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಂತಹ ಅಮಾನವೀಯ ಘಟನೆಗಳು ಖಂಡನೀಯ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಕಟ್ಟುನಿಟ್ಟಿನ  ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!