May 6, 2026

ಪುತ್ತೂರು: ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0
IMG-20240304-WA0011.jpg

ಪುತ್ತೂರು: ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ ಯುವತಿ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!