May 6, 2026

ಮಂಡ್ಯದಲ್ಲಿ ನಡೆದ ಪ್ರತಿಭಟನೆ ಪಾಕ್‌ ಪರ ಘೋಷಣೆ: BJP ಕಾರ್ಯಕರ್ತನ ಬಂಧನ

0
image_editor_output_image-1772203646-1709616218692.jpg

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವಿಚಾರವನ್ನೇ ಮುಂದಿಟ್ಟುಕೊಂಡು ಈಗ ಕಾಂಗ್ರೆಸ್‌ ಪ್ರಕರಣ ದಾಖಲಿಸಿದೆ.

ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ವೇಳೆ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್‌ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.

Leave a Reply

Your email address will not be published. Required fields are marked *

error: Content is protected !!