May 6, 2026

ಕಡಬದ ಆ್ಯಸಿಡ್ ದಾಳಿ ಪ್ರಕರಣ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ. ಪರಿಹಾರ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ

0
image_editor_output_image1882851336-1709627550213.jpg

ಮಂಗಳೂರು: ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಬಗ್ಗೆ ಡಿಸಿ ಕಚೇರಿಯಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಕರೆಯಲಾಗಿದೆ. ಮೂವರು ವಿದ್ಯಾರ್ಥಿನಿಯರೂ ಅಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತೆಯರಲ್ಲಿ ಒಬ್ಬರಿಗೆ ಶೇ.20, ಮತ್ತೊಬ್ಬರಿಗೆ ಶೇ.12 ಹಾಗೂ ಶೇ.10ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಗಾಯಗಾಗಿವೆ. ವಿದ್ಯಾರ್ಥಿನಿಯರ ನಗು, ಅಳುವನ್ನು ನೋಡಿದೆ. ಅವರ ಮನಸ್ಥೈರ್ಯಕ್ಕೆ ಮೆಚ್ಚಲೇಬೇಕು. ‘ನಾವು ಮತ್ತೆ ಕನ್ನಡ ಪರೀಕ್ಷೆ ಬರೆಯಬೇಕಾ’ ಎಂದು ಕೇಳಿದ್ದಾರೆ. ಇದರ ಬಗ್ಗೆ ಚಿಂತಿಸಬೇಡಿ ಎಂದು ಹೇಳಿದ್ದೇನೆ” ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!