February 3, 2026

ಕೆಲಸಕ್ಕೆ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಹಲ್ಲೆ: ಆರೋಪಿಯ ಬಂಧನ

0
image_editor_output_image-471815867-1709705054160.jpg

ಹಾಸನ: ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿಯೊಬ್ಬ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ, ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಸಕಲೇಶಪುರದ ಅಗ್ನಿ ಗ್ರಾಮದಲ್ಲಿ ನಡೆದಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಮದನ್ ಹಲ್ಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಮದನ್‍ಗೆ ಮದುವೆಯಾಗಿದ್ದು ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯಿಂದ ದೂರವಾಗಿದ್ದ.

ಬಳಿಕ ಗ್ರಾಮದ ಮಹಿಳೆಯೊಬ್ಬರ ಮೊಬೈಲ್ ನಂಬರ್ ಪಡೆದು ಮೆಸೇಜ್ ಮಾಡುತ್ತಿದ್ದ. ಈ ವೇಳೆ ಮಹಿಳೆ, ಮೆಸೇಜ್ ಮಾಡದಂತೆ ಎಚ್ಚರಿಕೆ ನೀಡಿ ನಂಬರ್ ಬ್ಲಾಕ್ ಮಾಡಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯ ಪುತ್ರಿಯ ನಂಬರ್ ಸಂಗ್ರಹಿಸಿ ಆಕೆಗೆ ಕರೆ ಮಾಡುವುದು, ಮೆಸೇಜ್ ಮಾಡುವುದು ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!