February 3, 2026

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರು ಮೃತ್ಯು, ನಾಲ್ಕು ಮಂದಿ ಗಂಭೀರ

0
image_editor_output_image-796389441-1709707420936.jpg

ಲಕ್ನೋ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂದು ಒಂದೇ ಕುಟುಂಬದ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಲಕ್ನೋದ ಕಾಕೋರಿಯ ಹತಾ ಹಜರತ್ ಸಾಹೇಬ್ ಕಾಕೋರಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು.

ಇಲ್ಲಿ ವಾಸವಿದ್ದ ಮುಶೀರ್ ಅಲಿ ಜರ್ದೋಜಿ ಅವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ ಪರಿಣಾಮ ಮನೆಯಲ್ಲಿದ್ದ ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದರು ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಮನೆಯೊಳಗೆ ಗಾಯಗೊಂಡು ಸಿಲುಕಿದ್ದ ಒಂಬತ್ತು ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸದೆ ಐವರು ಮೃತಪ್ಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!