ಪಡುಬಿದ್ರಿ: ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ: ನಾಲ್ವರು ಆರೋಪಿಗಳ ಬಂಧನ
ಉಡುಪಿ: ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ.
ರಾಜೀವ್ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ ನಕಲಿ 916 ಹಾಲ್ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್ ಕಂಪ್ಯೂಟರ್ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.




