“ನಮ್ಮ ಅತ್ತೆ ಬೇಗ ಸಾಯಬೇಕು ಸ್ವಾಮಿ” ಎಂಬ ಹರಕೆ ಬರೆದ ನೋಟು ವೈರಲ್
ಕಲಬುರಗಿ: ಪ್ರಸಿದ್ಧ ದೇಗುಲಗಳ ಹುಂಡಿ ಎಣಿಕೆ ಕಾರ್ಯ ಮಾಡುವಾಗ ಅನೇಕ ರೀತಿಯ ಚೀಟಿಗಳು ಸಿಗುತ್ತವೆ. ಇವುಗಳಲ್ಲಿ ಪ್ರೀತಿ-ಪ್ರೇಮ, ಮದುವೆ, ಪತಿ-ಪತ್ನಿ, ಅತ್ತೆ-ಸೊಸೆ ನಡುವಿನ ಜಗಳಗಳು, ಪಕ್ಕದಮನೆಯವರ ವಿಚಾರ ಹೀಗೆ ದೇವರಿಗೆ ಹರಕೆ ಕಟ್ಟಿ ಚೀಟಿ ಬರೆದು ಹಾಕುವುದನ್ನು ನೋಡಿರುತ್ತೇವೆ. ಅಂಥದ್ದೇ ವಿಚಾರವೊಂದು ಇದೀಗ ಕಲಬುರಗಿಯಲ್ಲಿಯೂ ಬೆಳಕಿಗೆ ಬಂದಿದೆ.
ಕೆಲ ದಿನಗಳ ಹಿಂದೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರ ದತ್ತನಹುಂಡಿ ಎಣಿಕೆ ಕಾರ್ಯ ನಡೆದಿತ್ತು.
ಬೇಡಿದ ವರ ಕೊಡುವ ಶ್ರೀಕ್ಷೇತ್ರ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿ ವಿಶೇಷ ನೋಟ್ ಸಿಕ್ಕಿದೆ. ಈ ನೋಟಿನಲ್ಲಿ ಬರೆದಿದ್ದನ್ನು ಓದಿದ ಹುಂಡಿ ಎಣಿಕಾರ್ಯ ಮಾಡುತ್ತಿರುವ ಸಿಬ್ಬಂದಿಯೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ದೇವಸ್ಥಾನ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಈ ವೇಳೆ 50 ರೂ. ಮುಖಬೆಲೆಯ ನೋಟೊಂದರ ಮೇಲೆ “ನಮ್ಮ ಅತ್ತೆ ಬೇಗ ಸಾಯಬೇಕು ಸ್ವಾಮಿ” ಎಂಬ ಹರಕೆಯನ್ನು ಬರೆದಿದ್ದು ಪತ್ತೆಯಾಗಿದೆ. ಈ ನೋಟಿನ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ




