ಕಡಬ ಕಾಲೇಜ್ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು: ವಿಟ್ಲದಲ್ಲಿ ಬಿ.ಕೆ ಸೇಸಪ್ಪ ಬೆದ್ರಕಾಡು ಆಗ್ರಹ
ವಿಟ್ಲ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯರ ಮೇಲೆ ನಡೆದ ಆಸಿಡ್ ದಾಳಿಯ ಆರೋಪಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಎಲ್ಲಾ ಶಾಲೆ ಕಾಲೇಜು ವಿದ್ಯಾರ್ಥಿಯರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಹೆತ್ತವರು ಠಾಣೆಗೆ ದೂರು ನೀಡಿದ ಸಂದರ್ಭದಲ್ಲಿ ತನಿಖೆಗೆ ಪೊಲೀಸರು ಹಿಂಜರಿಯಬಾರದು ಎಂದು ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ಹೇಳಿದರು.
ಯುವಕ ಯುವತಿಯರ ನಡುವೆ ಪ್ರೇಮ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರೀತಿಗೆ ಒಪ್ಪದ ಸಂದರ್ಭದಲ್ಲಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರಕರಣಗಳನ್ನು ಹೆತ್ತವರಿಗೆ, ಸಂಘಟನೆಗಳ, ಪೊಲೀಸ್ ಇಲಾಖೆಯ ಗಮನಕ್ಕೆ ತರಲು ಹಿಂದೇಟು ಹಾಕಬಾರದು. ಕಾಲೇಜಿಗೆ ಬೇಟಿ ನೀಡುವ ಅಪರಿಚಿತರನ್ನು ತನಿಖೆ ನಡೆಸದೆ ಒಳಗೆ ಬಿಡದಂತೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಾರ್ಯಾಧ್ಯಕ್ಷ ಚಂದ್ರಶೇಖರ್ ಯು. ವಿಟ್ಲ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರೇಮ ಬೆದ್ರಕಾಡು, ಪ್ರಧಾನ ಕಾರ್ಯದರ್ಶಿ ವಿದ್ಯಾ, ಗೌರವ ಸಲಹೆಗಾರ ಗೋವಿಂದ ನಾಯ್ಕ ಉಪಸ್ಥಿತರಿದ್ದರು.




