May 6, 2026

ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತದ ಬಲೆಗೆ ಬಿದ್ದ ಜಮೀನು ಸರ್ವೆಯರ್

0
image_editor_output_image1862056280-1709841020197.jpg

ಮಂಗಳೂರು: ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ.
ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಪೋಡಿ ಮುಖಾಂತರ ತೆಗೆಯುವ ಪ್ರಕ್ರೀಯೆ ಇರುತ್ತದೆ. ಗುರುಪುರ ಹೋಬಳಿಯಲ್ಲಿರುವ ನೀರುಮಾರ್ಗ ಗ್ರಾಮದ ಶ್ರೀಮತಿ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು, ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ದೂರುದಾರರು ಸ್ಟೆಲ್ಲಾ ಜನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಜಮೀನಿನ ತಾತ್ಕಾಲ್ ಪೋಡಿಗಾಗಿ ಅರ್ಜಿ ಸಲ್ಲಿಸಿ ಇದಕ್ಕಾಗಿ 1500 ರೂ ಯನ್ನು ಪವಾತಿ ಮಾಡಿ ರಶೀದಿ ಪಡೆದಿದ್ದರು.

Leave a Reply

Your email address will not be published. Required fields are marked *

error: Content is protected !!