ವಿದ್ಯಾರ್ಥಿಗಳಲ್ಲಿ ಕೊರೋನ ದೃಢ: ಅಗತ್ಯವಿದ್ದರೆ ಶಾಲೆಗಳ ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದ ವಿವಿದೆಡೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಪರಿಸ್ಥಿತಿ ಎದುರಾದರೆ ಪರೀಕ್ಷೆ ಮತ್ತು ಶಾಲೆಗಳನ್ನು ಬಂದ್ ಮಾಡುವುದಕ್ಕೆ ಸರಕಾರವು ಹಿಂದೆ ಸರಿಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೋಮವಾರ ಹೇಳಿದ್ದಾರೆ.
ನಿಯಮಿತವಾಗಿ ಆಫ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಅವರು ಹೇಳಿದ್ದಾರೆ.





