March 17, 2026

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಫಘಾತ: ಟ್ರಕ್ ಚಾಲಕ ಗಂಭೀರ..!

0
image_editor_output_image-665440515-1709959943235

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಬಿ.ಸಿ ರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.‌ ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!