March 18, 2026

ಟಿಕೆಟ್ ತಪ್ಪಿಸಲು ನಮ್ಮವರಿಂದಲೇ ಪಿತೂರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೇಸರ

0
image_editor_output_image1857973228-1709976659560.jpg

ಬೆಳಗಾವಿ: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ನಮ್ಮ ಬಗ್ಗೆ ವಿರೋಧ ವ್ಯಕ್ತವಾದರೆ ಕೇಂದ್ರದ ನಾಯಕರು ನಾವು ಮಾಡಿರುವ ಕೆಲಸದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ ಅದು ನನಗೆ ಅನುಕೂಲವಾಗುತ್ತೆ ಎಂದ ಅವರು ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು ಎಂದು ಹೇಳಿದ್ದಾರೆ.

ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!