May 6, 2026

ಸುಳ್ಯ: ಕಟ್ಟಡದಿಂದ ಬಿದ್ದು ವ್ಯಕ್ತಿ ಮೃತ್ಯು

0
image_editor_output_image1708825058-1709977425997.jpg

ಸುಳ್ಯ : ಪೈಂಟಿಂಗ್‌ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಜಬ್ಬಾರ್ ಎಂಬವರು ಪ್ರಾಣ ತ್ಯಜಿಸಿದವರು. ಜಬ್ಬಾರ್ ಸುಳ್ಯದ ಅಡ್ಕಾರ್ ಎಂಬಲ್ಲಿ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ಪೈಂಟಿಂಗ್ ಮಾಡುತ್ತಿದ್ದರು.

ಅಡೂರು ಸಮೀಪದ ಪಳ್ಳಂಗೋಡು ಎಂಬಲ್ಲಿಯ ನಿವಾಸಿಯಾಗಿದ್ದ ಇವರು ಪೈಂಟಿಂಗ್ ಮಾಡಲು ನೀರು ಹಾಕಿ ತೊಳೆಯುವಾಗ ಕಾಲು ಜಾರಿ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಜಬ್ಬಾರ್ ಅವರು ಬದುಕುಳಿಯುವುದು ಕಷ್ಟ ಎಂದು ವೈದ್ಯರು ಕೈ ಚೆಲ್ಲಿದ್ದರು.

ಹೀಗಾಗಿ ಮನೆಗೆ ವಾಪಾಸು ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮನೆ ಮಾಲೀಕ ಅಬ್ದುಲ್ಲಾ ಅವರ ನಿರ್ಲಕ್ಷ್ಯತನದಿಂದ ಈ ಘಟನೆ ನಡೆದಿದೆ ಎಂದು ಜಬ್ಬಾರ್ ಸಹೋದರ ಅಬ್ದುಲ್ ಖಾದರ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ಜಬ್ಬಾರ್ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!