ವಿಟ್ಲ ಹೊರೈಝನ್ ; ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ವಿಟ್ಲ’: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶಾಲಾ ಅಧ್ಯಕ್ಷ ಝುಬೈರ್ ಮಾಸ್ಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಲಾ ಉಪಾಧ್ಯಕ್ಷ ವಿ.ಕೆ.ಎಂ ಅಶ್ರಫ್ ,ಕಾರ್ಯದರ್ಶಿ ನೋಟರಿ ಅಬೂಬಕರ್ ,ಕೋಶಾಧಿಕಾರಿ ಅಂದುಞಿ ಗಮಿ, ,ಟ್ರಸ್ಟ್ ಗಳಾದ ಹಮೀದ್ ಬದ್ರಿಯಾ,ವಿ.ಪಿ ಆಶ್ರಫ್ ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಕೋಶಾಧಿಕಾರಿ ಶರೀಫ್ ಪೊನ್ನೋಟು,,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ, ಎಮಿನೆಂಟ್ ನ ಝುಬೈರ್ ಮಾಸ್ಟರ್ ಬೊಬ್ಬೆಕೇರಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮುರ್ಶಿದಾ ಮತ್ತು ಫಹೀಮಾ
ನಿರೂಪಿಸಿದರು.






