ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನು ಚಾಕುವಿನಿಂದ ಇರಿದು ಹತ್ಯೆ
ಲಕ್ನೋ: ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿನಿ ರಾಜ್‌ಭರ್ (30) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಕೊತ್ವಾಲಿ ಖಲೀಲಾಬಾದ್ ಪ್ರದೇಶದ ಆಕೆಯ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂದಿನಿ ದೇಹದ ಮೇಲೆ ಅನೇಕ ಇರಿತದ ಗಾಯಗಳಿವೆ. ಸುಮಾರು 10 ದಿನಗಳ ಹಿಂದೆ ವರದಿಯಾದ ವಿವಾದದ ಕುರಿತು ಅಪರಿಚಿತ ವ್ಯಕ್ತಿಗಳು ನಂದಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಐಜಿ ರಾಮ್ ಕೃಷ್ಣ ಭಾರದ್ವಾಜ್ ಹೇಳಿದ್ದಾರೆ.





