ಅಯೋಧ್ಯೆಯ ರಾಮಮಂದಿರದ ಬಳಿ ಉಡುಪಿಯ ವ್ಯಕ್ತಿ ಹೃದಯಾಘಾತದಿಂದ ಸಾವು
ಅಯೋಧ್ಯೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪ್ರತಿಷ್ಠೆಯ ಮಂಡಲಪೂಜೆ ಸಮಾಪನ ಸಂದರ್ಭ ರವಿವಾರ ಬೆಳಗ್ಗೆ ರಾಮನ ದರ್ಶನ ಪಡೆದು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂಸ್ಕೃತದಲ್ಲಿಯೇ ಮಾತನಾಡಿದ್ದರು. ಅಪರಾಹ್ನ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ದ್ವಾರದ ಬಳಿ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಿಧನ ಹೊಂದಿದ್ದರು. ಮುಂದಿನ ವ್ಯವಸ್ಥೆಯನ್ನು ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಗೋಪಾಲ್, ಮಾಜಿ ಶಾಸಕ ಕೆ.ರಘುಪತಿ ಭಟ್ ಮಾಡಿದರು.





