December 20, 2025

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಕ್ ದರೋಡೆ ಪ್ರಕರಣ: ಬಂಟ್ವಾಳ, ಸುಳ್ಯ ಮತ್ತು ಬಾಯಾರ್ ಮೂಲದ ಮೂವರು ಆರೋಪಿ ವಶಕ್ಕೆ

0
image_editor_output_image1315370681-1710142687042

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು, ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಆರೋಪಿಗಳಾದ ರಫೀಕ್‌ ಯಾನೆ ಗೂಡಿನ ಬಳಿ ರಫೀಕ್, ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್‌ ಹಾಗೂ ಬಾಯಾರು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ.

ಫೆಬ್ರವರಿ 7 ರಂದು ರಾತ್ರಿ ಬ್ಯಾಂಕ್ ಕಟ್ಟಡದ ಹಿಂಬದಿ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಖದೀಮರು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಹಾಗೂ ಹದಿನಾರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಣ ದರೋಡೆಗೈದಿದ್ದರು.

ಒಟ್ಟು ಈ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು, 3 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದೇ ತಂಡ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ಕಳ್ಳತನ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದರು.

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳ್ಳತನ ಮಾಡಿದ ಈ ತಂಡ ಹಿಂದಿನ ದಿನ ಬಂದು ಸಂಚು ರೂಪಿಸಿರುತ್ತಾರೆ. ಮರುದಿನ ಬಂದ ಐವರ ತಂಡದಲ್ಲಿ 4 ಜನ ಬ್ಯಾಂಕಿನ ಕಿಟಕಿ ಮುರಿದು ಒಳ ನುಗ್ಗಿ ಕೃತ್ಯ ಎಸಗಿದ್ದಾರೆ. ಒಬ್ಬ ಹೊರಗಡೆಯಿಂದ ಸುಳಿವು ನೀಡುತ್ತಿದ್ದ ಎನ್ನಲಾಗಿದೆ.

ಬಂಧಿಸಿದ ಪ್ರಮುಖ ಆರೋಪಿಗಳಲ್ಲಿ ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌ ಈತನ ಮೇಲೆ ದರೋಡೆ, ಕಳ್ಳತನದ ಹಲವಾರು ಪ್ರಕರಣಗಳಿವೆ. ಖಲಂದರ್‌ ಎಂಬಾತನ ಮೇಲೆ ಕಣ್ಣೂರು, ಪುತ್ತೂರು, ವಿಟ್ಲ, ಸಂಪ್ಯ ಠಾಣೆಗಳಲ್ಲಿ ಈ ಹಿಂದೆ ಅನೇಕ ಕಳ್ಳತನ ಪ್ರಕರಣಗಳಿವೆ. ಬಾಯಾರು ನಿವಾಸಿ ದಯಾನಂದ ಎಂಬವನು ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದು, ಈತ ಹಣದ ಆಸೆಗೊಸ್ಕರ ಇದೇ ಮೊದಲ ಬಾರಿ ಈ ಖರ್ತನಾಕ್‌ ತಂಡದೊಂದಿಗೆ ಸೇರಿಕೊಂಡು ಸ್ಟ್ರಾಂಗ್ ರೂಮಿನ ಭಾರಿ ಭದ್ರತೆಯ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡರಿಸುವಲ್ಲಿ ಈತನ ಪ್ರಮುಖ ಪಾತ್ರವಿದೆ.

ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್‌ ನೇತೃತ್ವದಲ್ಲಿ ಬೇರೆ ಬೇರೆ ವಿಶೇಷ ತಂಡಗಳನ್ನು ರಚಿಸಿ ಈ ಪ್ರಕರಣವನ್ನು ಬೇಧೀಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!