ಸಿಎಎ ವಿರುದ್ಧ ನಟ ವಿಜಯ್ ವಾಗ್ದಾಳಿ: ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನೋಡಿಕೊಳ್ಳಲು ವಿನಂತಿ
ಚೆನ್ನೈ: ಪೌರತ್ವ (ತಿದ್ದುಪಡಿ) ಕಾಯ್ದೆ, 2019 ಅನ್ನು ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ತಮಿಳು ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ತಳಪತಿ ವಿಜಯ್ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ವಿಜಯ್, ಸಿಎಎ ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ, ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯ್ದೆ 2019 (ಸಿಎಎ) ಯಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನೋಡಿಕೊಳ್ಳಬೇಕು. ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನಾಯಕರು ನೋಡಿಕೊಳ್ಳಬೇಕು ಎಂದು ವಿನಂತಿ ಮಾಡಿದ್ದಾರೆ.





