ವಿ.ಸಿ ನಾಲೆಗೆ ಉರುಳಿ ಬಿದ್ದ ಕಾರು: ಓರ್ವ ಸಾವು
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾಲುವೆ ದುರಂತ ಮತ್ತೆ ಮರುಕಳುಹಿಸಿದೆ. ವಿ.ಸಿ ನಾಲೆಗೆ ಕಾರೊಂದು ಉರುಳಿ ಬಿದ್ದು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಂದೀಶ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಅಣ್ಣ ತಮ್ಮಂದಿರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ನಿಯಂತ್ರಣ ತಪ್ಪಿ ನೀರಿಲ್ಲದೆ ಕಾಲುವೆಗೆ ಸೇತುವೆ ಮೇಲಿಂದ ಕಾರು ಉರುಳಿ ಬಿದ್ದಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.





