ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಮರಕ್ಕೆ ನೇತು ಹಾಕಿ ಚಿತ್ರಹಿಂಸೆ
ಗದಗ: ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.
ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಭೀಕರ ಕೊಲೆಯಾಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ





