March 19, 2026

ಮನೆಯಿಂದ ತೆರಳಿದ್ದ ಯುವತಿ ನಾಪತ್ತೆ

0
image_editor_output_image-1996351479-1710309754143.jpg

ಯಲ್ಲಾಪುರ: ಯುವತಿಯೊಬ್ಬಳು ಕಾಣೆಯಾದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲ್ಲಾಪುರ ತಾಲೂಕಿನ ಚಂದ್ಗುಳಿಯ ದೇಸಾಯಿಮನೆ ತೇಜಾ ರಾಮಕೃಷ್ಣ ಭಟ್ಟ (26)ಕಾಣೆಯಾದ ಯುವತಿ.

ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಕಳೆದ ಡಿಸೆಂಬರ್ 20 ರಂದು ಹುಬ್ಬಳ್ಳಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದು, ಅಲ್ಲಿಗೂ ಹೋಗದೇ ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮರಳಿ ಬಂದಿಲ್ಲ.

ಈ ಕುರಿತು ತಂದೆ ರಾಮಕೃಷ್ಣ ಎಸ್ ಭಟ್ಟ ದೇಸಾಯಿಮನೆ ಪೋಲಿಸ್ ದೂರು ನೀಡಿದ್ದಾರೆ.
ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ, ಇಂಗ್ಲಿಷ್ ಮಾತನಾಡುತ್ತಾಳೆ. ಈಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!