ನೀರಿನ ಸಮಸ್ಯೆ: ಸ್ವಿಮ್ಮಿಂಗ್ ಪೂಲ್ ಗಳಿಗೆ ನೀರು ಬಳಸಿದರೆ 5,000 ರೂ.ದಂಡ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರಿದ್ದು, ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಈಜುಕೊಳಗಳಿಗೆ ಕಾವೇರಿ ನೀರು ಬಳಸಬಾರದು ಎಂದು ಬೆಂಗಳೂರು ಜಲಮಂಡಲಿ ಆದೇಶಿಸಿದೆ. ನಿಯಮ ಉಲ್ಲಂಘಿಸಿದ್ದಲ್ಲಿ ರೂ.5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಜಲಮಂಡಳಿ ಕಾಯ್ದೆ 1964ರ ಕಲಂ 109ರಂತೆ ಈಜು ಕೊಳ ಉದ್ದೇಶಗಳಿಗೆ ಕಾವೇರಿ ನೀರು ಬಳಸಿದಲ್ಲಿ 5000 ರೂ. ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ 5000 ರೂ. ಜತೆಗೆ ಹೆಚ್ಚುವರಿಯಾಗಿ ಪ್ರತಿ ದಿನ 500 ರೂ. ದಂಡ ವಿಧಿಸಲಾಗುವುದು. ಹಾಗೆಯೇ, ಈಜುಕೊಳದ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿ





