December 19, 2025

ಪುತ್ತೂರಿನ ಮಾಜಿ ಶಾಸಕ, ಉರಿಮಜಲು ರಾಮ ಭಟ್‌ ನಿಧನ

0
image_editor_output_image824127115-1638799483731

ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್‌ರವರು ಕೊಂಬೆಟ್ಟಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

92ರ ಹರೆಯದ ಉರಿಮಜಲು ರಾಮ ಭಟ್ಟರವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿದ್ದವರು. ಆರ್.ಎಸ್.ಎಸ್. ಮೂಲಕ ಪುತ್ತೂರನ್ನು ಹಿಂದುತ್ವದ ಭದ್ರಕೋಟೆ ಮಾಡಲು ಅಡಿಪಾಯ ಹಾಕಿದ್ದವರು. ಜನಸಂಘ, ಬಿಜೆಪಿ ಮೂಲಕ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯಂತಹ ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದವರು. ವಕೀಲರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೋದ ಅಧ್ಯಕ್ಷರಾಗಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಧಾರಸ್ಥಂಭವಾಗಿ, ವಿದ್ಯಾಸಂಸ್ಥೆಗಳ ನಿರ್ಮಾತೃವಾಗಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದರು.

ಜನಸಂಘ ಮತ್ತು ಆ ಬಳಿಕದ ಬಿಜೆಪಿಯ ಸಂಘಟನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ರಾಮ ಭಟ್ಟರವರು ಹಲವು ನಾಯಕರನ್ನು ಬೆಳೆಸಿದವರು. ರಾಜ್ಯದ ಬೆರಳೆಣಿಕೆಯ ಬಿಜೆಪಿ ಶಾಸಕರಲ್ಲಿ ರಾಮ ಭಟ್ ಒಬ್ಬರಾಗಿದ್ದವರು.

Leave a Reply

Your email address will not be published. Required fields are marked *

You may have missed

error: Content is protected !!