December 19, 2025

ಉಡುಪಿ: ಮಲ್ಪೆಯ ಬೋಟ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ

0
image_editor_output_image1511944873-1710373777555.jpg

ಉಡುಪಿ: ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟ್ರೀಕಲ್ಸ್ ರವರ ಬಾಡಿಗೆ ರೂಮಿನಲ್ಲಿ ವಾಸವಿದ್ದು, ಮಾರ್ಚ್ 3 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!