September 19, 2024

ಬಂಟ್ವಾಳ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಇಬ್ಬರು ವಿದ್ಯಾರ್ಥಿಗಳು ಗಂಭೀರ

0

ಬಂಟ್ವಾಳ: ಬಸ್ ಇಳಿದು ಮನೆಯ ಕಡೆಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಹೋಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು.

ಸಜೀಪ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಬಸ್ ನಿಂದ ಇಳಿದು ಮನೆಗೆ ತೆರಳುವ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಬಸ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಾಲಕನ ಅಜಾಗರೂಕತೆಯಿಂದ ಕಾರು ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರ ವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Leave a Reply

Your email address will not be published. Required fields are marked *

error: Content is protected !!