May 6, 2026

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ: ಬೆಂಗಳೂರಿನಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಪುತ್ತಿಲ

0
IMG-20240314-WA0013

ಪುತ್ತೂರು: ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಸಂಘಟನೆ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರುನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿವಾಸದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪುತ್ತಿಲ ಅವರಿಗೆ ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರು ಪುತ್ತಿಲ ಅವರನ್ನು ಪಕ್ಷದ ಕಚೇರಿಗೆ ಕರೆದೊಯ್ದರು.

ಬೆಂಗಳೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಒಂದು ಹಂತದ ಮಾತುಕತೆ ಬಳಿಕ ಮುಖಂಡರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ‘ಧವಳಗಿರಿ’ಗೆ ಜೊತೆಯಾಗಿ ತೆರಳಿದರು.

Leave a Reply

Your email address will not be published. Required fields are marked *

error: Content is protected !!