ಕೇರಳದಲ್ಲಿ CAA ಜಾರಿಗೆ ತರುವುದಿಲ್ಲ: ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ 2019 ಅನ್ನು ಕೇರಳ ಜಾರಿಗೆ ತರುವುದಿಲ್ಲ ಎಂದು ಪುನರುಚ್ಚರಿಸಿದ್ದು, ಈ ವಿಷಯದ ಬಗ್ಗೆ ಕಾಂಗ್ರೆಸ್ ಮೌನವಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಸಿಪಿಎಂ ಇಂಡಿಯಾ ಮೈತ್ರಿಕೂಟದಲ್ಲಿ ಮಿತ್ರ ಪಕ್ಷವಾಗಿದೆ. ಆದರೆ ಈ ವಿಷಯದ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇನ್ನೂ ಮಾತನಾಡದ ಕಾರಣ ಸಿಎಎ ಅಧಿಸೂಚನೆಯ ನಂತರ ಕಾಂಗ್ರೆಸ್ ತೆಗೆದುಕೊಂಡ ನಿಲುವನ್ನು ವಿಜಯನ್ ಟೀಕಿಸಿದ್ದಾರೆ. ಸಿಎಎ ಬಗ್ಗೆ ಕೇರಳ ತಲೆಬಾಗುವುದಿಲ್ಲ ಅಥವಾ ಮೌನ ವಹಿಸುವುದಿಲ್ಲ ಎಂದು ವಿಜಯನ್ ಹೇಳಿದ್ದಾರೆ.





