May 6, 2026

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು

0
image_editor_output_image167382020-1710463089513.jpg

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!