ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ
ದೇವನಹಳ್ಳಿ: ಯುಪಿಎಸ್ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗದೀಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾರ್ಚ್ 12 ರಂದು ಮನೆಯವರು ಊರಿಗೆ ಹೋಗಿದರು. ನಿನ್ನೆ ರಾತ್ರಿ ಮರಳಿ ಮನೆಗೆ ಬಂದಾಗ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಎಂಎ, ಎಂಎಡ್ ವ್ಯಾಸಾಂಗ ಮಾಡಿದ್ದ ಜಗದೀಶ್, ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





