ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.





