February 4, 2026

ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಹಿಳೆ ಮಾನಸಿಕ ಅಸ್ವಸ್ಥೆ: ಗೃಹ ಸಚಿವ ಡಾ.ಜಿ. ಪರಮೇಶ್ವ‌ರ್

0
image_editor_output_image-881763995-1710495325007.jpg

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವ‌ರ್ ಹೇಳಿದ್ದಾರೆ.

ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಪರಮೇಶ್ವ‌ರ್, ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!