March 22, 2026

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ: ಕೆ ಎಸ್ ಈಶ್ವರಪ್ಪ ಘೋಷಣೆ

0
AA-150324-eshwarappa.jpg


 
ಶಿವಮೊಗ್ಗ: ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶಿತರಾಗಿರುವ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಅವರು, ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಅವರು ಬಿಜೆಪಿಯಲ್ಲಿ ಬಂಡಾಯ ಬಾವುಟ ಹಾರಿಸಿದ್ದಾರೆ.

ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಈಶ್ವರಪ್ಪ ಅವರು, ನಾನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಗೆದ್ದ ಎರಡು ತಿಂಗಳಿನಲ್ಲಿ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ ಎಂದರು.

ಇನ್ನು ಹಿಂದುತ್ವದ ಪರ ಮಾತನಾಡುವ ಪ್ರತಾಪ್ ಸಿಂಹ, ಸಿ.ಟಿ.ರವಿ, ಸದಾನಂದಗೌಡ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿಸಿದರು. ಯಡಿಯೂರಪ್ಪನವರು ತಮಗೆ ಬೇಕಾದವರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ. ಅವರು ಟಿಕೆಟ್ ನೀಡಿದ ಅಭ್ಯರ್ಥಿಗಳು ಸೋತರೆ ಅದಕ್ಕೆ ಯಡಿಯೂರಪ್ಪ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.”

Leave a Reply

Your email address will not be published. Required fields are marked *

error: Content is protected !!