February 3, 2026

ಅಗ್ನಿ ಅವಘಡ: ಭಾರತ ಮೂಲದ ದಂಪತಿ, ಪುತ್ರಿ ಸಜೀವ ದಹನ

0
image_editor_output_image-1559001660-1710581080389.jpg

ಒಟ್ಟಾವ: ಕೆನಡಾದಲ್ಲಿ ಭಾರತ ಮೂಲದ ಕುಟುಂಬವೊಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ದಂಪತಿ ಮತ್ತು ಪುತ್ರಿಯು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಅಗ್ನಿ ದುರಂತದ ಕುರಿತು ಹಲವು ಶಂಕೆ ವ್ಯಕ್ತಪಡಿಸಿದ್ದು ತನಿಖೆ ಆರಂಭಿಸಿದ್ದಾರೆ.

ಭಾರತ ಮೂಲದ ರಾಜೀವ್‌ ವಾರಿಕೂ (51), ಇವರ ಪತ್ನಿ ಶಿಲ್ಪಾ ಕೋಥಾ (47) ಹಾಗೂ ಪುತ್ರಿ ಮಹೇಕ್‌ ವಾರಿಕೂ (17) ಅವರು ಬಿಗ್‌ ಸ್ಕೈ ವೇ ಹಾಗೂ ವ್ಯಾನ್‌ ಕಿರ್ಕ್‌ ಡ್ರೈವ್‌ ಪ್ರದೇಶದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದು, ಇವರ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೂವರ ಶವಗಳು ಮನೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಹಲವು ರೀತಿಯ ಶಂಕೆ ವ್ಯಕ್ತಪಡಿಸಿದ್ದಾರೆ.

ಆಕಸ್ಮಿಕವಾಗಿ ಅಗ್ನಿ ದುರಂತ ಸಂಭವಿಸಿಲ್ಲ, ಉದ್ದೇಶಪೂರ್ವಕವಾಗಿ ನಡೆದಿರುವ ಕೃತ್ಯವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!