December 19, 2025

ಲೋಕಸಭಾ ಚುನಾವಣೆ ದಿನಾಂಕ ಫಿಕ್ಸ್: 7 ಹಂತಗಳಲ್ಲಿ ನಡೆಯಲಿರುವ ಚುನಾವಣೆ

0
image_editor_output_image-369218115-1710585896045

ನವದೆಹಲಿ: ದೇಶಾದ್ಯಂತ ಏಪ್ರಿಲ್ 19ರಿಂದ ಮೇ ರವರೆಗೆ ಲೋಕಸಭಾ ಚುನಾವಣೆ ಆರಂಭಗೊಳ್ಳಲಿದೆ. 7 ಹಂತಗಳಲ್ಲಿ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಿಗದಿಯಾಗಿದೆ.

ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಲಾಯಿತು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

97 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇದರಲ್ಲಿ 49.72 ಕೋಟಿ ಪುರುಷರಿದ್ದಾರೆ. 47.15 ಕೋಟಿ ಮಹಿಳೆಯರು. 1.90 ಕೋಟಿ 80 ವರ್ಷ ದಾಟಿದ ಮತದಾರರಿದ್ದಾರೆ. 2.18 ಲಕ್ಷ ಮಂದಿ ಶತಾಯುಷಿ ಮತದಾರರಿದ್ದಾರೆ. 88.4 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ತೃತೀಯ ಲಿಂಗಿ ಮಯದಾರರ ಸಂಖ್ಯೆ 48 ಸಾವಿರ. 1.8 ಕೋಟಿ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ದೇಶದಲ್ಲಿ 10 ಲಕ್ಷದ 500 ಸಾವಿರ ಮತಗಟ್ಟೆಗಳಿವೆ. 55 ಲಕ್ಷ ಇವಿಎಂ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜೂನ್ 16ಕ್ಕೆ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ ಅವರು, ಆ ಹೊತ್ತಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಇಂತಹ ಸರ್ಕಾರವನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗ ಸನ್ನದ್ಧವಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

Leave a Reply

Your email address will not be published. Required fields are marked *

You may have missed

error: Content is protected !!