ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ವಿರುದ್ಧ ಎಫ್‍ಐಆರ್ ದಾಖಲು
ತುಮಕೂರು: ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮೇಲೆ ಎಫ್‍ಐಆರ್ ದಾಖಲಾಗಿದೆ.
ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ನಡೆದಿದೆ ಎಂದು ಕಳೆದ ಗುರುವಾರ ರಾತ್ರಿ ಪಿಡಬ್ಲ್ಯೂಡಿ ಇಲಾಖೆ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದರು. ಈ ವೇಳೆ ಅವರ ಮೇಲೆ ಶಾಸಕ ಹಾಗೂ ಅವರ ಸಹಚರರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರವಿಕುಮಾರ್ ನೀಡಿದ ದೂರಿನಡಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ





