8ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಾಗಲಕೋಟೆ: ತಾಲೂಕಿನ ಕದಂಪುರದಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ ಮಾಡಿ ಪರಿಶೀಲಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಆರೋಪ ಕೇಳಿ ಬಂದಿದೆ.
ದಿವ್ಯಾ ಬಾರಕೇರ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಮಾ.15ರಂದು ಕದಂಪುರ ಪ್ರೌಢ ಶಾಲೆಯ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಅವರ 2 ಸಾವಿರ ರೂ. ಕಳೆದು ಹೋಗಿದ್ದು, ವಿದ್ಯಾರ್ಥಿಗಳ ಬಳಿ ಯಾರು ತೆಗೆದುಕೊಂಡಿದ್ದೀರಿ ಎಂದು ವಿಚಾರಿಸಿದ್ದಾರೆ.
ಬಳಿಕ ಕೆಲವು ವಿದ್ಯಾರ್ಥಿನಿಯರ ವಿರುದ್ಧ ಕಳ್ಳತನ ಆರೋಪ ಮಾಡಿ ಶಿಕ್ಷಕಿ, ಮುಖ್ಯಶಿಕ್ಷಕ ಸೇರಿದಂತೆ ಇತರೆ ಶಿಕ್ಷಕರು ದುರ್ಗಾದೇವಿ ಮುಂದೆ ಆಣೆ ಮಾಡಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.





