ಬಂಟ್ವಾಳ: ಅಕ್ರಮ ಮರಳು ಸಾಗಾಟ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು
ಬಂಟ್ವಾಳ: ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶನಿವಾರ ರಾತ್ರಿ ಬ್ರಹ್ಮರಕೂಟ್ಟು-ತಲಪಾಡಿ ಎಂಬಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎ ರಾಮಕೃಷ್ಣ ನೇತೃತ್ವದ ಪೊಲೀಸರು ತಪಾಸಣೆಗಾಗಿ ಕೆಎ70 3611 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತಡೆದು ವಿಚಾರಿಸಿದಾಗ ಈ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ನದಿಯಿಂದ ಮರಳನ್ನು ಕಳ್ಳತನ ಮಾಡಿಕೊಂಡು ಸಾಗಾಟ ಮಾಡುತ್ತಿರುವ ಬಗ್ಗೆ ಚಾಲಕ ಒಪ್ಪಿಕೊಂಡಿದ್ದು, ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





