ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು
ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು.
ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ ಮದ್ಯಾಹ್ನ ವೇಳೆ ಬೇಕರಿಗೆ ತೆರಳಲು ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ಧಿಕ್ಕಿನಲ್ಲಿ ಧಾವಿಸಿದ್ದ ಬೈಕ್ ಢಿಕ್ಕಿ ಹೊಡೆದಿದೆ.





