March 20, 2026

ಸುಳ್ಯ: ಕೂಜಿಮಲೆ ವ್ಯಾಪ್ತಿಯಲ್ಲಿ ಶಂಕಿತ ನಕ್ಸಲರು: ಎಎನ್ಎಫ್ ತಂಡದಿಂದ ಕೂಂಬಿಂಗ್ ಆರಂಭ

0
image_editor_output_image-634357624-1710753089150.jpg

ಸುಳ್ಯ: ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌.

ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು.

Leave a Reply

Your email address will not be published. Required fields are marked *

error: Content is protected !!