February 4, 2026

ಕಾಸರಗೋಡು: ಖಾಸಗಿ ಬಸ್ ಪಲ್ಟಿ: ಚಾಲಕ ಮೃತ್ಯು-20 ಮಂದಿಗೆ ಗಾಯ

0
image_editor_output_image-753420895-1710775322440

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ವ್ಯಕ್ತಿ.

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಲಾಯಿತು. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!