ಮಂಗಳೂರು: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದರು.
ಅವರು ಮಾ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.





