ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣ ವಶಕ್ಕೆ
ಮಂಡ್ಯ: ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ.
ಗಿರೀಶ್ ಎಂಬುವರು ಕ್ರೆಟಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಚುನಾವಣಾಧಿಕಾರಿಗಳು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಗಿರೀಶ್ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದರು.





