ಡಿವೈಎಸ್ಪಿ ಶ್ರೀಧರ್ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ
ಬೆಂಗಳೂರು: ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. DySP ಶ್ರೀಧರ್ ಪೂಜಾರ್ ಬಗ್ಗೆ ಮಾಹಿತಿಯಿದ್ದರೆ ಸಿಐಡಿ ಫೈನಾನ್ಷಿಯಲ್ ಇಂಟೆಲಿಜೆನ್ಸ್ ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





