March 22, 2026

ತಮಿಳುನಾಡು: ಎಐಎಡಿಎಂಕೆ, ಎಸ್ಡಿಪಿಐ ಮೈತ್ರಿ: ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಮುಬಾರಕ್

0
image_editor_output_image1010172122-1710926368208.jpg

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಎಸ್ ಡಿಪಿಐ ಮೈತ್ರಿ ಸಾಧಿಸಿದ್ದು, ಇಂದು ಚೆನ್ನೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಲಾಯಿತು.

ಎನ್ ಡಿಎಯಿಂದ ಹೊರಬಂದು ಬಿಜೆಪಿಯ ವಿರುದ್ಧ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ಎಐಎಡಿಎಂಕೆ ಲೋಕಸಭಾ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಸೇರಿ ಮೈತ್ರಿಕೂಟವನ್ನು ಏರ್ಪಡಿಸಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಸ್ ಡಿಪಿಐ ತಮಿಳುನಾಡು ರಾಜ್ಯಾಧ್ಯಕ್ಷ ಮುಹಮ್ಮದ್ ಮುಬಾರಕ್ ಮುಂತಾದವರು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು. ಎಸ್ ಡಿಪಿಐ ದಿಂಡಿಗಲ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, ಅಭ್ಯರ್ಥಿಯಾಗಿ ಮುಹಮ್ಮದ್ ಮುಬಾರಕ್ ಕಣಕ್ಕಿಳಿಯಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!