March 20, 2026

ಸಾಲಗಾರರ ಕಾಟಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ

0
image_editor_output_image-1939097524-1711014326857.jpg

ಚಿತ್ರದುರ್ಗ: ಸಾಲಗಾರರ ಕಾಟಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆ ,ಆಡಿಕೊಂಡ ಮಹಿಳೆ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂದು ಗುರುತಿಸಲಾಗಿದೆ.

ರಂಜಿತಾ ಒಂದು ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು. 5 ವರ್ಷದ ಕೆಳಗೆ ದರ್ಶನ್ ಎಂಬವರನ್ನು ವಿವಾಹವಾಗಿದ್ದರು. ಆಕೆಯ ಪತಿ ದರ್ಶನ್ ನೀರಾವರಿ ಇಲಾಖೆಯಲ್ಲಿ ಎಂಜನಿಯರ್ ಆಗಿದ್ದರು.

ರಂಜಿತಾ ಮೀಟರ್ ಬಡ್ಡಿ ಲೆಕ್ಕದಲ್ಲಿ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು, ಸಾಲ ಕೊಟ್ಟವರು ಹಣ ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ರಂಜಿತಾ ಮನನೊಂದು ಆತ್ಮಹತ್ಯೆಗೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!