ಬಂಟ್ವಾಳ: MDMA ಡ್ರಗ್ಸ್ ಮಾರಾಟದ ಆರೋಪಿಯ ಬಂಧನ, 2.30 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಲೊರೊಟ್ಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36)ಬಂಧಿತ ಆರೋಪಿ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,40,500 ಆಗಬಹುದು ಎಂದು ಅಂದಾಜಿಸಲಾಗಿದೆ.
ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





