March 19, 2026

ದ್ವೇಷ ಭಾಷಣ: ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು

0
image_editor_output_image575314600-1711063974144.jpg

ಬೆಂಗಳೂರು: ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಈ ನಡುವೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧವೂ ಹಲಸೂರು ಗೇಟ್ ಪೊಲೀಸರು ದ್ವೇಷ ಭಾಷಣದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಆರೋಪಿಸಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಎಂಕೆ ಮನವಿ ಮಾಡಿತ್ತು. ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕರಂದ್ಲಾಜೆ, ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಅದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಆದರೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ನೀಡಿದ ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ(ಸಿಇಒ)ಗೆ ಸೂಚಿಸಿತ್ತು.

Leave a Reply

Your email address will not be published. Required fields are marked *

error: Content is protected !!