ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಕೊಲೆ ಮಾಡಿದ ಪತ್ನಿ
ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ.
ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್ (38) ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿ, ಉಸಿರು ಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.





